ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ಶಿಕ್ಷಣ ಸಂಸ್ಥೆಯಿಂದ ನಿಧಿ ಸಮರ್ಪಣೆ

(ನ್ಯೂಸ್ ಕಡಬ) newsladaba.com ಮಂಗಳೂರು, ಫೆ. 06. ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಅಯೋಧ್ಯಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮ ಮಂದಿರದ ನಿರ್ಮಾಣಕ್ಕೆ ನಿಧಿ ಸಮರ್ಪಣೆಯನ್ನು ಶ್ರೀ ಗೋಪಾಲಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ ಅಯೋಧ್ಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗೆ ಸಮರ್ಪಿಸಲಾಯಿತು.

 

ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸಿ.ಪಿ ಕಾಮತ್, ಶಕ್ತಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿಅಧಿಕಾರಿ ಪ್ರಖ್ಯಾತ್‍ ರೈ ಉಪಸ್ಥಿತರಿದ್ದರು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆಂಕಟ್ರಮಣ, ಪ್ರಾರ್ಥನೆಯನ್ನು ನೆರವೇರಿಸಿದರು.

Also Read  ಸಿಡಿಲು ಬಡಿದು‌ ಯುವಕರಿಬ್ಬರು ಮೃತ್ಯು

error: Content is protected !!
Scroll to Top