? ಉಡುಪಿ: ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಕಾರು…! ➤ ಮನೆಗೋಡೆ ಕುಸಿತ, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 06. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಹರಿಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈ ಘಟನೆಯ ವೇಳೆ ಅಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೂ ಗಾಯವಾಗಿದೆ. ಹರಿಣ್ ಶೆಟ್ಟಿ ಎಂಬವರು ಕಾರ್ಕಳದಿಂದ ಉಡುಪಿ ಕಡೆಗೆ ಬರುತ್ತಿದ್ದು, ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಸಮೀಪ ತಲುಪುತ್ತಿದ್ದಂತೆಯೇ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪುತ್ತು ನಾಯಕ್ ಎಂಬವರ ಮನೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಮಗುಚಿ ಬಿದ್ದಿದ್ದಲ್ಲದೇ, ಡಿಕ್ಕಿಯ ರಭಸಕ್ಕೆ ಮನೆಯ ಒಂದು ಭಾಗ ಸಂಪೂರ್ಣ ಕುಸಿದುಬಿದ್ದಿದೆ. ಕಾರಿನ ಮುಂಭಾಗ ಜಖಂಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top