ವಿದ್ಯಾರ್ಥಿ ನಿಲಯಗಳ ದಾಖಲಾತಿ – ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಾದ ಬೋಳಾರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ಚಿಲಿಂಬಿ, ದೇರಳಕಟ್ಟೆ, ಗುರುಕಂಬಳ, ಬೆಂಜನಪದವು ಹಾಗೂ ಕಡಬ ತಾಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.







ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಹಾಗೂ  ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಮಂಗಳೂರು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಇವರನ್ನು ಸಂಪರ್ಕಿಸಬಹುದು ಎಂದು  ದ.ಕ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






 

error: Content is protected !!
Scroll to Top