ರಾಜ್ಯ ಸರಕಾರಕ್ಕೆ ತಾ.ಪಂ ರದ್ದುಪಡಿಸುವ ಅಧಿಕಾರವಿಲ್ಲ…! ➤ ಸಚಿವ ಶಿವರಾಂ ಹೆಬ್ಬಾರ್

(ನ್ಯೂಸ್ ಕಡಬ) newskadaba.com ಕಾರವಾರ, ಫೆ. 07. ರಾಜ್ಯ ಸರಕಾರ ತಾ.ಪಂ ವ್ಯವಸ್ಥೆಯನ್ನು ರದ್ದುಪಡಿಸಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಷಯ, ತಾ.ಪಂ ರದ್ದುಪಡಿಸುವ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.


ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ಈ ಬಾರಿಯೂ ತಾ.ಪಂ ಹಾಗೂ ಜಿ.ಪಂ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದೆ ಎಂದು ಹೇಳಿದರು.

Scroll to Top