? ಒಂಟಿ ಸಲಗದ ದಾಳಿಗೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೈಸೂರು,‌ ಫೆ. 07. ಆನೆ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ‌ನಡೆದಿದೆ.

ಮೃತರನ್ನು ಕೇರಳದ ಜೋಯಿ (45) ಎಂದು‌ ಗುರುತಿಸಲಾಗಿದೆ. ಇವರು ಇಲ್ಲಿನ ಜಮೀನೊಂದನ್ನು ಗುತ್ತಿಗೆಗೆ ಪಡೆದು ಶುಂಠಿ ಬೇಸಾಯ ಮಾಡುತ್ತಿದ್ದರು. ಈ ಸಂದರ್ಭ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಹಳ್ಳಕ್ಕೆ ಬಿಸಾಡಿದ್ದು, ಇದರಿಂದ ಗಂಭೀರ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Scroll to Top