ಕಲ್ಲಡ್ಕ: ಬೆಳಗಿನ ಘಟನೆ ಮಾಸುವ ಮುನ್ನವೇ ಕಾರು – ಡಿಯೋ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.07. ಕಾರು ಹಾಗೂ ಹೋಂಡಾ ಡಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಡಿಯೋ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಸವಾರನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ತೀವ್ರತೆಗೆ ಡಿಯೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕ್ರೆಟಾ ಕಾರಿನ ಒಂದು ಪಾರ್ಶ್ವ ಹಾನಿಯಾಗಿದೆ. ಇಂದು ಬೆಳಗ್ಗೆಯಷ್ಟೇ ಕಲ್ಲಡ್ಕದಲ್ಲಿ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿ ಯುವಕನೋರ್ವ ಮೃತಪಟ್ಟಿದ್ದು, ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಘಟನೆಗೆ ಕಲ್ಲಡ್ಕ ಸಾಕ್ಷಿಯಾಗಿದೆ.

 

 

Scroll to Top