ಸುಬ್ರಹ್ಮಣ್ಯ – ಗುಂಡ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ➤ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಕಡಬ, ಫೆ.08. ಬೃಹತ್ ಮರವೊಂದು ರಸ್ತೆಗಡ್ಡವಾಗಿ ಮುರಿದ ಬಿದ್ದುದರಿಂದ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯುಂಟಾಗಿದೆ.

ಬೆಂಗಳೂರಿನಿಂದ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಇದಾಗಿದ್ದು, ಸೋಮವಾರವಾದ್ದರಿಂದ ಕ್ಷೇತ್ರಕ್ಕೆ ಆಗಮಿಸುವ ಯಾತ್ರಿಕರ ಸಂಖ್ಯೆ ಹೆಚ್ಚಾಗಿದೆ. ಗುಂಡ್ಯ ಅರಣ್ಯ ಕಚೇರಿಯ ಬಳಿ ಬೃಹತ್ ಮರ ಮುರಿದು ಬಿದ್ದ ಕಾರಣ ಸಂಚಾರಕ್ಕೆ ತೊಡಕಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ವಿದ್ಯುತ್ ಲೈನ್ ಗೂ ಹಾನಿಯಾಗಿದ್ದು, ಅರಣ್ಯಾಧಿಕಾರಿಗಳು ಮರವನ್ನು ತೆರವುಗೊಳಿಸುತ್ತಿದ್ದಾರೆ.

Also Read  ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

 

error: Content is protected !!
Scroll to Top