ಗ್ರಾಮದ ಅಭಿವೃದ್ದಿಗೆ ಸಂಘಟಿತ ಪ್ರಯತ್ನ ಅಗತ್ಯ ➤ ಸಚಿವ ಅಂಗಾರ

(ನ್ಯೂಸ್ ಕಡಬ) newskadaba.com ಕೊಂಬಾರು, ಫೆ. 08. ಗ್ರಾಮದ ಅಭಿವದ್ಧಿಗೆ ಸಮಾಜದ ಎಲ್ಲಾ ಸಮುದಾಯದವರು ಸಂಘಟಿತರಾಗಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮನೋಭಾವ ಮುಖ್ಯ ಮತ್ತು ಇಂತಹ ಪ್ರಯತ್ನ ಪತ್ರಕರ್ತರ ಗ್ರಾಮವಾಸವ್ಯ ಶಿಬಿರದಲ್ಲಿ ನಡೆದಿರುವುದನ್ನು ನಾನು ಗುರುತಿಸಿದ್ದೇನೆ ಎಂದು‌ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಹೇಳಿದ್ದಾರೆ.

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಸಹಯೋಗದೊಂದಿಗೆ, ದ.ಕ ಜಿಲ್ಲಾಡಳಿತ, ದ.ಕ‌ ಜಿ.ಪಂ, ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ತಾ.ಪಂ ಮತ್ತು ಕೊಂಬಾರು ಗ್ರಾ.ಪಂ ಸಹಭಾಗಿತ್ವದಲ್ಲಿ ಕೊಂಬಾರು ಶಾಲೆಯಲ್ಲಿ ಜ.31ರಂದು ನಡೆದ ಪತ್ರಕರ್ತರ ಗ್ರಾಮವಾಸ್ತವ್ಯದ ಕಾರ್ಯಕ್ರಮಕ್ಕೆ ಸಹಕಾರ ನೀಡಿದವರಿಗೆ ಫೆ. 07ರಂದು ನಡೆದ ಅಭಿವಂದನಾ ಕಾರ್ಯ ಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಈ ಹಿಂದಿನ ಗ್ರಾಮವಾಸ್ತವ್ಯ ಶಿಬಿರದಲ್ಲೂ ಗ್ರಾಮದ ಜನರ ಸಮಸ್ಯೆ ಪರಿಹಾರಕ್ಕಾಗಿ ಪತ್ರಕರ್ತರು ಶ್ರಮಿಸಿರುವುದನ್ನು ಗಮನಿಸಿ ದ್ದೇನೆ. ಇಂತಹ ಅಪರೂಪದ ಕಾರ್ಯಕ್ರಮವನ್ನು ಗ್ರಾಮಸ್ಥರ ಜೊತೆ ಪತ್ರಕರ್ತರು ಸೇರಿಕೊಂಡು ನಡೆಸಿರುವುದಕ್ಕೆ ತಾನು ಪತ್ರಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು. ಗ್ರಾಮಾಭಿವೃದ್ಧಿಗೆ ಪೂರಕವಾದ ಕೆಲಸವನ್ನು ಮಾಡುವ ಯಾವುದೇ ಸಂಸ್ಥೆ ಗಳಿಗೆ ತಾನು ಬೆಂಬಲ ನೀಡುತ್ತೇನೆ. ಕೊಂಬಾರು, ಸಿರಿಬಾಗಿಲು ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನದ ಅಗತ್ಯವಿದೆ. ಈ ಬೇಡಿಕೆಯ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದ ಸಚಿವ ಅಂಗಾರರವರು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶ್ರಮಿಸಿದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು, ಕಡಬ ತಾಲೂಕು ಪತ್ರಕರ್ತರ ಸಂಘದ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಿದರು.

Also Read  ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಒಂದು ಅಪರೂಪದ ಸಮಾಜಮುಖಿ ಮಾದರಿ ಕಾರ್ಯಕ್ರಮ ಎಂದು ಶ್ಲಾಘಿಸಿದರು. ಸಮಾರಂಭದ ವೇದಿಕೆಯಲ್ಲಿ ದ.ಕ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾ.ಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಸಕಲೇಶಪುರ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಾಣಗೆರೆ ಪರಮೇಶ್, ಕಡಬ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್, ಖಜಾಂಜಿ ತಸ್ಲಿಮ್ ಮರ್ಧಾಳ, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಕೊಂಬಾರು ಗ್ರಾಮ ಪಂಚಾಯತ್ ಸದಸ್ಯರು,ಕಡಬ ಪತ್ರಕರ್ತರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್ .ಕೆ ಸ್ವಾಗತಿಸಿದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

Also Read  ಮೈಸೂರು : ದಸರಾ ಗಜಪಡೆಗಳಿಗೂ ಕೊವೀಡ್ ಟೆಸ್ಟ್

error: Content is protected !!
Scroll to Top