? ಕಾಸರಗೋಡು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗರ ಗಾಯ

(ನ್ಯೂಸ್ ಕಡಬ) newskadaba.com. ಕಾಸರಗೋಡು, ಫೆ. 08. ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬಂದ್ಯೋಡು ಮುಟ್ಟಂ ಎಂಬಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಮುಟ್ಟಂ ಸೈದಾಲಿ ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಸೈದಾಲಿ ಅವರ ಮಗನ ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top