? ವಿಟ್ಲ: ಒಂಟಿ ಕಾಡುಕೋಣ ಪ್ರತ್ಯಕ್ಷ…! ➤ ಸಾರ್ವಜನಿಕರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 09. ಇಲ್ಲಿನ ಕೊಳ್ನಾಡು ಗ್ರಾಮದ ಸುತ್ತಮುತ್ತಲಿನ ಭಾಗದಲ್ಲಿ ಒಂಟಿ ಕಾಡುಕೋಣ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.

ಕೊಳ್ನಾಡು ಗ್ರಾಮದ ಸೆರ್ಕಳ, ಪೀಲ್ಯಡ್ಕ, ನಾರ್ಶ ಪ್ರದೇಶದಲ್ಲಿ ಈ ಕಾಡುಕೋಣ ಪ್ರತ್ಯಕ್ಷವಾಗಿದೆ. ಈ ಭಾಗದ ಸುತ್ತಮುತ್ತಲಿನಲ್ಲಿ ಹಲವು ಮನೆಗಳು ಹಾಗೂ ಶಾಲೆಗಳಿದ್ದು, ಪ್ರತಿನಿತ್ಯ ನೂರಾರು ಜನರು ಇದೇ ರಸ್ತೆ ಮೂಲಕ ಸಂಚಾರ ಮಾಡುತ್ತಿದ್ದಾರೆ. ಇದೀಗ ಕಾಡುಕೋಣ ಪ್ರತ್ಯಕ್ಷವಾಗಿದ್ದರಿಂದ ಜನರು ಆತಂಕಪಡುವಂತಾಗಿದೆ.

error: Content is protected !!
Scroll to Top