ಕಡಬ: ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಕಳ್ಳತನ ಪ್ರಕರಣ ? ಸಂಚಾರಿ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವ ಅಂಗಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ ಮೌಲ್ಯದ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಚಾರ ಅರಣ್ಯ ಇಲಾಖೆಯ ಪ್ರಭಾರ ಅಧಿಕಾರಿಯ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತ ಸಂಘದಿಂದ ಸಚಿವ ಎಸ್. ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು.


ಸುಬ್ರಹ್ಮಣ್ಯ ವಲಯದ ಐತ್ತೂರು ರಕ್ಷಿತಾರಣ್ಯದ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಶಾಮೀಲಾಗಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳನ್ನು ಕಡಿದು ಮಾರಾಟ ಮಾಡಿದ್ದಾರೆನ್ನುವ ಸುದ್ದಿಯ ಹಿನ್ನಲೆಯಲ್ಲಿ ಕಡಬದ ಮಾಧ್ಯಮ ವರದಿಗಾರರು ವರದಿ ಮಾಡುವುದಕ್ಕಾಗಿ ಸ್ಥಳಕ್ಕೆ ತೆರಳುತ್ತಿದ್ದಾಗ ತನಿಖಾಧಿಕಾರಿಯಾಗಿ ಆಗಮಿಸಿದ್ದ ಮಂಗಳೂರು ಅರಣ್ಯ ಸಂಚಾರ ದಳದ ಪ್ರಭಾರ ಅಧಿಕಾರಿ ಸಂಧ್ಯಾ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಮಾಡಲು ನಿರ್ಬಂಧ ಹೇರಿರುವುದು ಮತ್ತು ವರದಿಗಾರರೊಂದಿಗೆ ದರ್ಪದಿಂದ ಮಾತನಾಡಿರುವ ವಿಚಾರದ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದಿರುವುದನ್ನು ಸ್ವತಃ ಗಮನಿಸಿರು ಸಚಿವ ಎಸ್, ಅಂಗಾರ ಅವರು ಫೆ.9ರಂದು ಮುಂಜಾನೆಯೇ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದರು, ಬಳಿಕ ಸಚಿವರಿಗೆ ಆಲಂಕಾರಿನಲ್ಲಿ ನಡೆದ ಸಚಿವರ ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ ಅವರು ಮನವಿ ಸಲ್ಲಿಸಿದ್ದರು, ಈ ಸಂದರ್ಭದಲ್ಲಿ ಸಚಿವರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Also Read  ಸುಳ್ಯದ ಹಲವೆಡೆ ಮತ್ತೆ ಭೂಕಂಪನ

 

error: Content is protected !!
Scroll to Top