ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆಯಿಂದ ಪ್ರಚೋದನಕಾರಿ ಭಾಷಣದ ಆರೋಪ ➤ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ SDPI ಮುಖಂಡ ರಿಯಾಝ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಕಡಬ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.

ಕಡಬ ಠಾಣಾ ಉಪ ನಿರೀಕ್ಷಕ ರುಕ್ಮನಾಯ್ಕ್ ದೂರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಉಪಾಧ್ಯಕ್ಷ ಉಮೇಶ್ ಗೌಡ, ಸದಸ್ಯರಾದ ಕೀರ್ತನ್ ಸೂಡ್ಲು, ನಿತೀಶ್ ಉಪಸ್ಥಿತರಿದ್ದರು.

Scroll to Top