ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ.

ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Also Read  ಕಡಬ ಗೃಹರಕ್ಷಕದಳದ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ ಚೂಂತಾರು ಭೇಟಿ ಮುಖ್ಯ ಮಂತ್ರಿ ಪದಕ ಪುರಸ್ಕೃತ ಜಿಲ್ಲಾ ಕಮಾಂಡೆಂಟ್ ಅವರಿಗೆ ಕಡಬ ಘಟಕದಿಂದ ಸನ್ಮಾನ

 

error: Content is protected !!
Scroll to Top