ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಕೌಟುಂಬಿಕ ಕಲಹದಿಂದಾಗಿ ಕೆಎಸ್.ಆರ್.ಟಿಸಿ ನಿರ್ವಾಹಕರೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್.ಆರ್.ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಹೋದರ ಹಾಗೂ ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕೆ.ಎಸ್.ಆರ್.ಟಿಸಿ ಸಂಸ್ಥೆಯಲ್ಲಿ ನಿರಂತರ ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದು, ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ ಎಂದು ಬರೆದಿರುವ ಅವರು, ನನ್ನ ಮಕ್ಕಳು ಹಾಗು ತಾಯಿಯನ್ನು ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Also Read  ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

error: Content is protected !!
Scroll to Top