(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 11. ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರಿನ ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತ ಬಾಲಕನನ್ನು ಹಡವಿನಕೋಣೆ ನಿವಾಸಿ ಅರಾನ್ (15) ಎಂದು ಗುರುತಿಸಲಾಗಿದೆ. ಈತನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ವಾರವಷ್ಟೇ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿದ ಕಾರಣ ಈತನಿಗೆ ದಂಡ ವಿಧಿಸಲಾಗಿತ್ತು. ಇಂದು ಆಳ್ವೆಗದ್ದೆ ಕ್ರಾಸ್ ಬಳಿ ವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತನಿಗೆ ಬೈಕ್ ನೀಡಿದ ಪೋಷಕರ ಮೇಲೆ ಕೇಸು ದಾಖಲಾಗುವ ಸಾಧ್ಯತೆ ಇದೆ.