ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ನೂತನ 11 ಉತ್ಪನ್ನಗಳು ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 11. ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು.

ದರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಮೊದಲಾದವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಹೊರ ತಂದಿರುವಂತಹ 11 ಬಗೆಯ ಸಿರಿ ಉತ್ಪನ್ನಗಳನ್ನು ಬಿಡುಗಡೆಗೊಳಿಸಿದರು. ಸಿರಿ ಸಂಸ್ಥೆಯು ಈಗಾಗಲೇ 13 ಸ್ವಂತ ಮಳಿಗೆ ಹಾಗೂ 300 ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿದೆ. 2 ಸಾವಿರ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಧರ್ಮಸ್ಥಳದ ಸಿರಿ ಸಂಸ್ಥೆ ಪ್ಯಾಕೇಟ್ ಮಾಡಿ, ಮಾರುಕಟ್ಟೆಗೆ ಒದಗಿಸುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಟ್ರಸ್ಟಿಗಳಾದ ಶ್ರದ್ಧಾ ಅಮಿತ್, ರಾಮಸ್ವಾಮಿ, ಅರೇಕಾ ಟೀ ಸಂಸ್ಥೆಯ ಸ್ಥಾಪಕ ನಿವೇದನ್ ನೆಂಪೆ, ಕುಸುಮ ದೇವಾಡಿಗ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Also Read  ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನರಾರಂಭ

error: Content is protected !!
Scroll to Top