ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಬಿಯರ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಲ್ಲುಗುಂಡಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ.


ಮಡಿಕೇರಿಯಿಂದ ಮಂಗಳೂರು ಕಡೆಗೆ ಬಿಯರ್ ಬಾಕ್ಸ್ ಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯು ಜೋಡುಪಾಲ ಎಂಬಲ್ಲಿ ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

 

Scroll to Top