ಕಡಬ: 108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಕಡಬದ 108 ಅಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರದಂದು ನಡೆದಿದೆ.

ಕಡಬದ ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ ನಿವಾಸಿ ಲಲಿತಾ ಎಂಬಾಕೆ ಹೆರಿಗೆ ನೋವು ಬಂದ ಕಾರಣ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದರು. ತಿಂಗಳ ಮೊದಲೇ ಹೆರಿಗೆ ನೋವು ಬಂದ ಹಿನ್ನೆಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲು ವೈದ್ಯಾಧಿಕಾರಿ ಸೂಚಿಸಿದ್ದು, ಅದರಂತೆ ಕಡಬದ 108 ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿಗೆ ಕರೆದೊಯ್ಯವ ವೇಳೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯದಿಂದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಎಂಟಿ ನವ್ಯಾ ಹಾಗೂ ಪೈಲಟ್ ರಾಜೇಶ್ ಸಹಕರಿಸಿದರು.

error: Content is protected !!

Join the Group

Join WhatsApp Group