(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಕರಾವಳಿಯ ಜನಪದ ಕ್ರೀಡೆಯಾದ ಕಂಬಳದಲ್ಲಿ ಬೈಂದೂರಿನ ವಿಶ್ವನಾಥ್ ಎಂಬವರು ಓಡಿಸಿದ ಕೋಣಗಳು 9.15 ಸೆಕೆಂಡ್ ಗಳಲ್ಲಿ 100 ಮೀಟಲ್ ಓಡಿ ಹೊಸ ದಾಖಲೆ ಸೃಷ್ಟಿಸುವ ಮೂಲಕ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿಯನ್ನು ಹೊಂದಿದ್ದ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮುರಿದಿದ್ದಾರೆ.
ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳ ಎಂಬಲ್ಲಿ ಏರ್ಪಡಿಸಲಾಗಿದ್ದ ಕಂಬಳದಲ್ಲಿ ಬೈಂದೂರಿನ ವಿಶ್ವನಾಥ್ ದೇವಾಡಿಗ (23) ಓಡಿಸಿದ ಕೋಣಗಳು 9.15 ಸೆಕೆಂಡ್ಗಳಲ್ಲಿ 100 ಮೀಟರ್ ಓಡಿವೆ. ಈ ಹಿಂದೆ ಶ್ರೀನಿವಾಸ್ ಗೌಡ ಎಂಬವರು 9.55 ಸೆಕೆಂಡ್ ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್ ಅವರು ಶ್ರೀನಿವಾಸ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ. ಚಿಕ್ಕವನಿದ್ದಾಗಿನಿಂದಲೂ ನಾನು ಕಂಬಳವನ್ನು ನೋಡುತ್ತಿದ್ದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, 2013ರಲ್ಲಿ ನಡೆದಿದ್ದ ಸ್ಪರ್ಧೆ ನನಗೆ ಪ್ರೇರಣೆ ನೀಡಿತ್ತು. ಎಸ್ಸೆಸ್ಸೆಲ್ಸಿ ಮುಗಿದ ಬಳಿಕ ಮುಂಬೈ ಕ್ಯಾಂಟೀನ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ನನಗೆ ಸಿಟಿ ಜೀವನಶೈಲಿ ಇಷ್ಟವಿಲ್ಲ. ನನ್ನ ಪೋಷಕರು ಹಾಗೂ ಒಡಹುಟ್ಟಿದವರಂತೆ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದುಕೊಂಡಿದ್ದೇನೆ. ಮನೆಗೆ ಬಂದಾಗಲೆಲ್ಲಾ ಕೋಣಗಳನ್ನು ಬೆಳೆಸಲು ಆರಂಭಿಸಿದ್ದೆ. ಸುರೇಶ್ ಕಡಿನಾಟಾರ್ ಮತ್ತು ವೆಂಕಟ್ ಪೂಜಾರಿ ಅವರು ನನಗೆ ಪ್ರೇರಣೆಯಾಗಿದ್ದಾರೆ. ಕಳೆದ 7 ವರ್ಷಗಳಿಂದ ನಾನು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇನೆಂದು ತಿಳಿಸಿದ್ದಾರೆ.