ಕಡಬ: ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 12. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಲ್ಲಾಜೆಯಲ್ಲಿ ನಡೆದಿದೆ.

ಗಾಯಗೊಂಡವರನ್ನು ಪೆರಾಜೆ ಗ್ರಾಮದ ಕುಂಬಳಚೇರಿಯ ಸಂಜಯ್ ಎಂದು ಗುರುತಿಸಲಾಗಿದೆ. ಇವರು ಪೆರಾಜೆಯಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತಿದ್ದ ಕಾರು ಕಲ್ಲಾಜೆ ಸೇತುವೆಯ ಬಳಿ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

error: Content is protected !!
Scroll to Top