ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ



(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 13. 2020-21ನೇ ಸಾಲಿನ ಮೇ. 24 ರಿಂದ ಜೂ. 16ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.








ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.






error: Content is protected !!
Scroll to Top