ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 13. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಅವರು ಸದ್ಯ ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಮಡಪ್ಪಾಡಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Also Read  ಪೊಲೀಸರಿಗೆ ಧಮ್ಕಿ ಹಾಕಿದ ಬಿಜೆಪಿ‌ ಶಾಸಕ 🔥ಧಮ್ಕಿ ಹಾಕಿದ ಠಾಣೆಯಲ್ಲೇ ವಿಚಾರಣೆಗೆ ಹಾಜರಾದ ಹರೀಶ್ ಪೂಂಜಾ

error: Content is protected !!
Scroll to Top