? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ. 13. ಹಣ್ಣಿನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಯುವಕನೋರ್ವ ಸಜೀವ ದಹನವಾಗಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಮೃತನನ್ನು ವೀರೇಶ್ ಮುಂಡರಗಿ(18) ಎಂಸು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಂಡ ವೇಳೆ ಅಂಗಡಿಯೊಳಗೆ ವೀರೇಶ್ ಎಂಬ ಯುವಕ ಮಾತ್ರವೇ ಇದ್ದು, ಯುವಕ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾನೆ. ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಾರಂಭ ➤ ವಿವಿಧ ಸವಲತ್ತುಗಳ ಉದ್ಘಾಟನೆ

error: Content is protected !!
Scroll to Top