? ಬೈಕ್ ಗಳೆರಡರ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 13.‌ ಬೈಕ್ ಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ ದಾಸನದೊಡ್ಡಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಹೊಂಬಾಳೇಗೌಡ(45) ಎಂದು ಗುರುತಿಸಲಾಗಿದೆ. ಹೊಂಬಾಳೇಗೌಡರು ದಾಸನದೊಡ್ಡಿ ಗ್ರಾಮದಿಂದ ಕೊಳ್ಳೇಗಾಲದ ಕಡೆಗೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಹೊಂಬಾಳೆಗೌಡ ಅವರನ್ನು ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಡಬ: ಯುವತಿ ನಾಪತ್ತೆ

error: Content is protected !!
Scroll to Top