? ಮಂಗಳೂರು: ಕೋಕೇನ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ಕೋಕೇನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ವಿಭಾಗದ ಪೊಲೀಸರು ಬಿಜೈ ಕೆಎಂಸಿ ಕಾಲೇಜು ಆಸುಪಾಸಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೋಳಾರ ಮಾರಿಗುಡಿ ನಿವಾಸಿ ಸುಪ್ರೀತ್ (35) ಎಂದು ಗುರುತಿಸಲಾಗಿದೆ. ಆತನಿಂದ 2 ಲಕ್ಷ ರೂ. ಬೆಲೆಬಾಳುವ 21.13 ಗ್ರಾಂ ಕೊಕೇನ್ ಸಹಿತ ಎರಡು ಮೊಬೈಲ್ ಫೋನ್ ಹಾಗೂ ಎರಡು ಸಾವಿರ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Scroll to Top