ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ದ ಸುಹಾನಾ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 14. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಪುತ್ತೂರಿನ ಸುಹಾನಾ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸುಹಾನಾಳು ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ಕಾರುಣ್ಯ ನಿಧಿ ಕರ್ನಾಟಕ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ವಿಶೇಷ ಝೀರೋ ಟ್ರಾಫಿಕ್ ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ಆಕೆಯ ಚಿಕಿತ್ಸೆಯ ವೆಚ್ಚವನ್ನೂ ಕೂಡಾ ವಹಿಸಿಕೊಂಡಿತ್ತು. ಸುಹಾನಳಿಗೆ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಕಾಲಾವಕಾಶವನ್ನು ಕೂಡ ನೀಡಿದ್ದರಾದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Also Read  ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ! ➤ ಕರ್ನಾಟಕದ ನಗರಗಳಲ್ಲೂ ಇಂದಿನಿಂದ 5G ಸೇವೆ ಲಭ್ಯ

error: Content is protected !!
Scroll to Top