ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19. ಹಗಲಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ರಾತ್ರಿ ಹೊತ್ತು ಚಿನ್ನದ ಸರ ಎಗರಿಸುವ ಖತರ್ನಾಕ್ ಕಳ್ಳನನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ.

ಖತರ್ನಾಕ್ ಕಳ್ಳನನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಪೊರೋಷತ್ತಮ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಎದ್ದು ಸೀರಿಯಸ್ ಆಗಿ ಆ ಅಧಿಕಾರಿಯ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ್ ಡ್ಯೂಟಿ ಮುಗಿಯುತ್ತಿದ್ದಂತೆ ಸ್ನೇಹಿತರಾದ ಪ್ರದೀಪ್, ಪ್ರಜ್ವಲ್ ಜೊತೆ ಸೇರಿ ಕಳ್ಳತನಕ್ಕೆ ಇಳಿಯುತ್ತಿದ್ದ. ಒಂಟಿಯಾಗಿ ಓಡಾಡೋ ವೃದ್ಧರು, ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ ಚೈನ್ ಸ್ನ್ಯಾಚಿಂಗ್ ಮಾಡಿ ಎಸ್ಕೇಪ್ ಆಗುತ್ತಿದ್ದರು. ಕೆಲ ದಿನಗಳ ಹಿಂದೆ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಮೂವರು ಸೇರಿ ಮಾರುತಿ ರಿಟ್ಜ್ ಕಾರಲ್ಲಿ ಬಂದು ಸರಗಳವು ಮಾಡಿ ಎಸ್ಕೇಪ್ ಆಗಿದ್ದರು. ಆ ವೇಳೆ ಘಟನಾ ಸ್ಥಳದ ಸಿಸಿಟಿವಿಯಲ್ಲಿ ಕಾರಿನ ನಂಬರ್ ಅಸ್ಪಸ್ಟವಾಗಿ ಕಾಣಿಸಿತ್ತು. ಕಾರಿನ ಬೆನ್ನು ಬಿದ್ದ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿಗಳಾದ ಪುರುಷೋತ್ತಮ್, ಪ್ರದೀಪ್ ಮತ್ತು ಪ್ರಜ್ವಲ್ ನನ್ನು ಅರೆಸ್ಟ್ ಮಾಡಿದ್ದಾರೆ.

ಈ ಮೂವರ ಬಂಧನದಿಂದ ನಗರದ ದಕ್ಷಿಣ ಭಾಗದ 9 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳವು ಮಾಡಿದ್ದ 18 ಪ್ರಕರಣಗಳು ಪತ್ತೆಯಾಗಿವೆ. ಕೃತ್ಯಕ್ಕೆ ಬಳಸಿದ್ದ ಕಾರು, ಪಲ್ಸರ್ ಬೈಕ್ ಸೇರಿದಂತೆ 700 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

error: Content is protected !!

Join the Group

Join WhatsApp Group