?? ಉಪ್ಪಳ: ಯುವಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಳ, ಫೆ. 16. ಗುಂಪೊಂದು ತಲವಾರು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ.


ಹಲ್ಲೆಗೊಳಗಾದವನ್ನು ಉಪ್ಪಳ ಮಣಿಮುಂಡ ನಿವಾಸಿ ಮುಹಮ್ಮದ್ ಹರ್ಶಿದ್(33) ಎಂದು ಗುರುತಿಸಲಾಗಿದೆ. ಇವರು ಪತ್ನಿ ಹಾಗೂ ಮಕ್ಕಳ ಜೊತೆ ಉಪ್ಪಳ ಪೇಟೆಗೆಂದು ಬಂದಿದ್ದು, ಹರ್ಶಿದ್ ಅವರು ಅಂಗಡಿಯಿಂದ ಸಾಮಗ್ರಿಗಳನ್ನು ಖರೀದಿಸುತ್ತಿದ್ದ ಸಂದರ್ಭ ಮೂರು ಮಂದಿಯ ಗುಂಪೊಂದು ದಾಳಿ ನಡೆಸಿ, ತಲವಾರಿನಿಂದ ಕಡಿದು ಪರಾರಿಯಾಗಿದೆ. ಗಾಯಾಳವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಇನ್ಮುಂದೆ LPG ಸಿಲಿಂಡರ್ ಗೂ ಒಟಿಪಿ ಕಡ್ಡಾಯ

error: Content is protected !!
Scroll to Top