ಸುಳ್ಯ: ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 16. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದ ಅಂಬಟಡ್ಕ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆಗೆ ಯತ್ನಿಸಿದವನನ್ನು ಉತ್ತರಕಾಂಡ ಮೂಲದ ಸಾದಿಕ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸಲೂನ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸೋಮವಾರದಂದು ರಾತ್ರಿ 8 ಗಂಟೆಗೆ ಸುಳ್ಯ ಅಂಬಟಡ್ಕ ಬಳಿ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ತಕ್ಷಣವೇ ಸ್ನೇಹಿತರು ಅವನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದು ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Also Read  ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ದರ ಹೆಚ್ಚಳಕ್ಕೆ ಸರ್ಕಾರ ಅಸ್ತು

error: Content is protected !!
Scroll to Top