ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಕ್ಕೆ ತೆರೆ ಎಳೆದ ಸುರಭಿ ದ್ವಿವೇದಿ ➤ ರಾಜ್ಯಾಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 17. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳುವ ಸುರಭಿ ದ್ವಿವೇದಿ ಸ್ಪಷ್ಟನೆ ನೀಡಿದ್ದಾರೆ.

ಕಳೆದೆರಡು ವಾರಗಳಿಂದ ಈ ಕುರಿತು ತಲೆದೋರಿದ್ದ ಎಲ್ಲಾ ಗೊಂದಲಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿರುವ ಇವರು, ಎಂ.ಎಸ್. ರಕ್ಷಾ ರಾಮಯ್ಯ ಅವರು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಪಕ್ಷದ ಆಂತರಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ ಎಂದವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಚುನಾವಣೆಯಲ್ಲಿ ಸೋತವರು ನಮ್ಮವರೇ, ಗೆದ್ದವರೂ ನಮ್ಮವರೇ ಆಗಿದ್ದಾರೆ. ನಮ್ಮಲ್ಲಿನ ಗೊಂದಲಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ಯಾರಿಗೂ ಅನ್ಯಾಯವಾಗುವುದಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದರು.

Also Read  ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

error: Content is protected !!
Scroll to Top