ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕೆಂದು ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 18. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೈದ ಯುವಕನನ್ನು ರಾಮಕೃಷ್ಣ ಎಂದು ಗುರುತಿಸಲಾಗಿದೆ. ಈತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಮೃತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಆತನ ಪರಿಚಯವಿಲ್ಲ. ಆದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲದಕ್ಕಿಂತ ಮನುಷ್ಯತ್ವನೇ ಮುಖ್ಯ. ನನಗೆ ಗೊತ್ತಿಲ್ಲದ ಹಾಗೆ ದೊಡ್ಡ ಅಭಿಮಾನಿಯಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದು, ಅದರಂತೆಯೇ ಅಂತ್ಯಕ್ರಿಯೆಗೆ ಬಂದಿದ್ದೇನೆ. ಅವರ ಮನೆಯವರಿಗೆ ಬಹಳ ನಷ್ಟವಾಗಿದೆ. ದೇವರು ಈತನ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಕೊಡಲಿ ಎಂದು ಹೇಳಿದರು.

Also Read  ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

error: Content is protected !!
Scroll to Top