(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 19. ಯಕ್ಷರಂಗದ ಸಿಡಿಲಮರಿ ಎಂದೇ ಖ್ಯಾತಿ ಪಡೆದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶ್ರೀಧರ್ ಭಂಡಾರಿ (73) ಅವರು ಇಂದು ಮುಂಜಾನೆ ವಿಧಿವಶರಾದರು.
ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರ ಅಭಿಮನ್ಯು ಪಾತ್ರವು ಭಾರೀ ಪ್ರಸಿದ್ಧಿ ಪಡೆದಿತ್ತು. ರಂಗಸ್ಥಳದಲ್ಲಿ ಚುರುಕಿನ ಹಾಗೂ ಅತಿ ವೇಗದ ನಡೆಯಿಂದ ಇವರಿಗೆ ಸಿಡಿಲಮರಿ ಎಂಬ ಬಿರುದು ದೊರಕಿದೆ. ಒಮ್ಮೆಗೆ 200ರಿಂದ 250ರಷ್ಟು ಧೀಂಗಿಣ ಹಾಕುತ್ತಿದ್ದ ಶ್ರೀಧರ ಭಂಡಾರಿ ಅವರು ಬಭ್ರುವಾಹನ, ಅಶ್ವತ್ಥಾಮ, ಕುಶ ಹಾಗೂ ಭಾರ್ಗವ ಮೊದಲಾದ ಪಾತ್ರಗಳನ್ನು ನಿರ್ವಹಿಸಿದ್ದರು.