(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 19. ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ಸಂಧರ್ಭ ಅಚಾನಕ್ ಆಗಿ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ ಕೊಡಂಗೆ ಅವಿನಾಶ್ (23) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದ್ದು, ತಕ್ಷಣವೇ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.