ಸುಳ್ಯ: 25ನೇ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 19. ಕನ್ನಡ ಸಾಹಿತ್ಯ ಪರಿಷತ್ ಮತ್ತು 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ನೇತೃತ್ವದಲ್ಲಿ ಹಿರಿಯ ಸಾಹಿತಿ ಡಾ.ಪೂವಪ್ಪ ಕಣಿಯೂರು ಅವರ ಅಧ್ಯಕ್ಷತೆಯಲ್ಲಿ ಎನ್.ಎಂ.ಸಿ ವಿದ್ಯಾಲಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಭುವನೇಶ್ವರಿ ಮೆರವಣಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ. ಅವರು ಚಾಲನೆ ನೀಡಿದರು.

ಸಮ್ಮೇಳನದ ಉದ್ಘಾಟನೆಯನ್ನು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ| ಪೂವಪ್ಪ ಕಣಿಯೂರು, ಡಾ| ಕೆ.ವಿ.ಚಿದಾನಂದ, ಡಾ.ಹರಿಪ್ರಸಾದ್ ತುದಿಯಡ್ಕ, ಪ್ರದೀಪ್ ಕುಮಾರ್ ಕಲ್ಕೂರ, ತಹಶೀಲ್ದಾರ್ ಅನಿತಾಲಕ್ಷ್ಮೀ, ಕೆ.ಟಿ.ವಿಶ್ವನಾಥ್, ಜಯಪ್ರಕಾಶ್ ರೈ ಮೊದಲಾದವರು ಉಪಸ್ಥಿತರಿದ್ದರು.

Also Read  ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ

error: Content is protected !!
Scroll to Top