ಚಾರ್ಮಾಡಿ ಘಾಟ್ ನಲ್ಲಿ ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 19. ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ‌ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‍ ನಲ್ಲಿ ನಡೆದಿದೆ.





ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ರಸ್ತೆಯ ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಕೂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ತಡೆಗೋಡೆ ಮುರಿದು ಬಿದ್ದಿದೆ. ಒಂದೇ ಕುಟುಂಬದ ನಾಲ್ವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.






error: Content is protected !!
Scroll to Top