ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20. ಬೈಕಿಗೆ ಢಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಬಸ್ ತಂಗುದಾಣಕ್ಕೆ ಅಪ್ಪಳಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ.

ನೆಲಮಂಗಲ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕಿಗೆ ಅತೀ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದ ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ ನಿವಾಸಿ ಕೆಂಪರಾಜು ಹಾಗೂ ಮಕ್ಕಳಾದ ಸೌಮ್ಯ, ಸಂಜಯ್ ಸ್ಥಳದಲ್ಲೇ ಮೃತಪಟ್ಟರೆ, ಕೆಂಪರಾಜು ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Also Read  ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಕಾರಿನಲ್ಲಿದ್ದ 6 ಜನರಲ್ಲಿ ಸಾಜನ್, ನವನೀದ್ ಎಂಬವರು ಸಾವನ್ನಪ್ಪಿದರೆ, ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಕಾರಿನಲ್ಲಿದ್ದವರು ಬೆಂಗಳೂರಿನ ಹೊರಮಾವು ಬಳಿಯ ಎಚ್ ಕೆ ಬಿಕೆ ಕಾಲೇಜಿನ ಇಂಜಿನಿಯರ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇದರಲ್ಲಿ ಸಾವನಪ್ಪಿದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ನಾಗವಾರದ ನಿವಾಸಿಗಳಾಗಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಕುದೂರು ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!
Scroll to Top