ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆ ವಿಮೆ ಲಾಭ ಪಡೆಯಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ (ಇಎಸ್‍ಐ) ನೋಂದಣಿಯಾದ ಕನಿಷ್ಟ 2 ವರ್ಷಗಳ ಅವಧಿಯಲ್ಲಿ ಕನಿಷ್ಠ 78 ದಿನಗಳ ವಂತಿಗೆ ಪಾವತಿಸಿ ನಿರುದ್ಯೋಗಿಯಾದ ವಿಮಾದಾರನಿಗೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಮೂಲಕ ನಿರುದ್ಯೋಗ ನಗದು ಪರಿಹಾರ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.


ಈ ಯೋಜನೆಯು ಪ್ರಸ್ತುತ ಸಾಲಿನ ಜೂನ್ ಅಂತ್ಯದವರೆಗೆ ಚಾಲ್ತಿಯಲ್ಲಿರುತ್ತದೆ. ಇಎಸ್‍ ಐ ವಿಮಾದಾರರಾಗಿ ನೋಂದಾಯಿತ ಕಾರ್ಮಿಕರು ಹಾಗೂ ಅನ್ಯ ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾದವರು ಯೋಜನೆಯ ಲಾಭವನ್ನು ಪಡೆಯಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.esic.nic.inನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ದ.ಕ.ಉಪವಿಭಾಗ-1&2, ಮಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

error: Content is protected !!
Scroll to Top