(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಆರೆಸ್ಸೆಸ್ ವಿರೋಧಿ ಮಾತನಾಡಿದ ಪಿಎಫ್.ಐ ಸಂಘಟನೆಯ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದದಲ್ಲಿ ಮಾತನಾಡಿದ ಅವರು, ಉಳ್ಳಾಲದಲ್ಲಿ ಪಿಎಫ್.ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಹಾಗೂ ಅಸಂವಿಧಾನಿಕವಾಗಿದ್ದು, ಆರ್.ಎಸ್.ಎಸ್ ಸಂಘಟನೆಯು ದೇಶಭಕ್ತಿಯ ಸಂಘಟನೆ ಎಂದರು. ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಈ ಕುರಿತು ಪಿಎಫ್.ಐ ಸಂಘಟನೆಯ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಇತ್ತೀಚೆಗೆ ಪಿಎಫ್.ಐ ಸ್ಥಾಪನಾ ದಿನದ ಪ್ರಯುಕ್ತ ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಿಎಫ್ಐ ನಾಯಕರು ಆರೆಸ್ಸೆಸ್ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದರು ಇದನ್ನು ವಿರೋಧಿಸಿ ಬೊಮ್ಮಾಯಿ ಅವರು ಈ ಹೇಳಿಕೆಯನ್ನು ತಿಳಿಸಿದ್ದಾರೆ.