ಸಚಿವ ಶ್ರೀನಿವಾಸ್ ಪೂಜಾರಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ



(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.





ಘಟನೆಯಲ್ಲಿ ಸಚಿವ ಕೋಟ ಪೂಜಾರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ತನ್ನ ಸರಕಾರಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕುಂಬಳಗೋಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top