ಐತ್ತೂರು ಗ್ರಾ.ಪಂ ಅಧ್ಯಕ್ಷರಾಗಿ ಶ್ಯಾಮಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 19. ಐತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ಯಾಮಲ ಹಾಗೂ ಉಪಾಧ್ಯಕ್ಷರಾಗಿ ರೋಹಿತ್ ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳ ಪೈಕಿ 6 ಬಿಜೆಪಿ ಬೆಂಬಲಿತ ಹಾಗೂ 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ. ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಿಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ಯಾಮಲ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ರೋಹಿತ್ ಎಸ್. ಅವರು ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯರಾದ ಧನಲಕ್ಷ್ಮೀ, ವಿಜಯಲಕ್ಷ್ಮಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶೇಖರ್ ಬಿ, ಕಾರ್ಯದರ್ಶಿ ರಮೇಶ್ ಆಚಾರಿ, ಬಿಲ್ ಕಲೆಕ್ಟರ್ ಶಿಬು ಕೆ.ಟಿ. ಮೊದಲಾದವರು ಉಪಸ್ಥಿತರಿದ್ದರು.

Also Read  ➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

error: Content is protected !!
Scroll to Top