ಕಡಬ: ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ವ್ಯಕ್ತಿಯೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರನ್ನು ಕಡಬ ನಿವಾಸಿ ಸಂಶುದ್ದೀನ್(27) ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 13 ರಂದು ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯು ಸುಮಾರು 5.4 ಅಡಿ ಎತ್ತರವಿದ್ದು, ಸಪೂರ ಶರೀರ ಹೊಂದಿದ್ದಾರೆ. ನೀಲಿ ಬಣ್ಣದ ನೈಟ್ ಪ್ಯಾಂಟ್, ಲೈಟ್ ಪಿಂಕ್ ಟೀ ಶರ್ಟ್ ಧರಿಸಿರುತ್ತಾರೆ. ವ್ಯಕ್ತಿಯು ಕನ್ನಡ ಹಾಗೂ ತುಳು ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ದಿನ KA-19-HE-2931 Honda Activa ಮೋಟಾರ್ ಸೈಕಲ್‍ನ್ನು ತೆಗೆದುಕೊಂಡು ಹೋಗಿರುತ್ತಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕಡಬ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಕಡಬ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಾರು ಅಪಘಾತ ➤ ಪ್ರಯಾಣಿಕರ ರಕ್ಷಣೆಗೆ ನೆರವಾದ ಗೃಹ ಸಚಿವ

error: Content is protected !!
Scroll to Top