(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಪೈಚಾರು ಆರ್ತಜೆ ಬಳಿ ನಡೆದಿದೆ.
ಪೈಚಾರಿನಿಂದ ಸೋಣಂಗೇರಿ ಕಡೆ ಹೋಗುತ್ತಿದ್ದ ಕಾರಿಗೆ, ಬೆಳ್ಳಾರೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರುಗಳ ಮುಂಭಾಗ ಜಖಂಗೊಂಡಿದ್ದು, ಬೆಳ್ಳಾರೆ ಕಡೆಯಿಂದ ಬರುತ್ತಿದ್ದ ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಕಣ್ಣಿಗೆ ಗಾಯಗಳಾಗಿವೆ.