? ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ ಇಂಡಿಯಾ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 21. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ವಿಮಾನದೊಳಗಿದ್ದ ಎಲ್ಲ 64 ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ವಿಜಯವಾಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜಿ.ಮಧುಸೂದನ್ ರಾವ್ ಹೇಳಿದ್ದಾರೆ. ಹಲವಾರು ದೀಪಗಳನ್ನು ಹೊಂದಿದ್ದ ವಿದ್ಯುತ್ ಕಂಬವು ಸಂಪೂರ್ಣವಾಗಿ ನೆಲಕ್ಕಪ್ಪಳಿಸಿರುವುದು ದೃಶ್ಯದಲ್ಲಿ ಕಂಡುಬಂದಿದ್ದು, ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ಬಲಬದಿಯ ರೆಕ್ಕೆ ಸ್ವಲ್ಪ ನಜ್ಜುಗುಜ್ಜಾಗಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

Also Read  ಪಂಪ್ ವೆಲ್ ಫ್ಲೈಒವರ್ ನಿಂದ ಕೆಳಗೆ ಬಿದ್ದ ಕಾರು ➤ ಓರ್ವ ಮೃತ್ಯು, ಇಬ್ಬರು ಗಂಭೀರ

error: Content is protected !!
Scroll to Top