ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು -ಬೆಂಗಳೂರು ರಾ. ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಬುಡೋಳಿ ಸಮೀಪದ ಅಪಾಯಕಾರಿ ಹೊಂಡಕ್ಕೆ ಉರುಳಿ ಬಿದ್ದಿದೆ. ತಕ್ಷಣವೇ ಕಾರ್ಯ ಪ್ರವೃತ್ತರದ ಬುಡೋಳಿ ಯೂತ್ ಫೇಡರೇಶನ್ ಸದಸ್ಯರು ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಸದಸ್ಯರು ಕಾರ್ಯಾಚರಣೆ ನಡೆಸಿ, ಕಾರಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ➤ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ

error: Content is protected !!
Scroll to Top