ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ವಿಕಲಚೇತನರ  ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕ ಅವರು ವಾಸಿಸುತ್ತಿರುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಒದಗಿಸಿಕೊಡಲು ಅನುಕೂಲವಾಗುವಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವ ಸ್ಟೋರ್, ಮಂಗಳೂರು -575006, ದೂರವಾಣಿ ಸಂಖ್ಯೆ:0824-2458173 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು

error: Content is protected !!
Scroll to Top