ಸುಬ್ರಹ್ಮಣ್ಯ: ಅಂಗನವಾಡಿ ಕೇಂದ್ರದಲ್ಲಿ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 21. ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಎಂಬ ವಿನೂತನ ಯೋಜನೆಯಡಿ ಆರೋಗ್ಯವಂತ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮವು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ಫೆ. 18ರಂದು ನಡೆಯಿತು.

ಇದರ ಅಧ್ಯಕ್ಷತೆಯನ್ನು ಅಂಬಿಕಾ ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ‌ ಶೈಲಜಾರವರು ವಹಿಸಿದ್ದರು. ಉದ್ಘಾಟನೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ/ತ್ರಿಮೂರ್ತಿ ಅವರು ನೆರವೇರಿಸಿ, ತಾಯಿ-ಮಗುವಿನ ಆರೋಗ್ಯ ಸಲಹೆಗಳನ್ನು ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಸುಗುಣ ನಿರೂಪಿಸಿ, ವಿಶಾಲಾಕ್ಷಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಕ್ಕಳ ತಾಯಂದಿರು, ಬಾಲವಿಕಾಸ ಸಮಿತಿಯವರು, ಸ್ತ್ರೀ ಶಕ್ತಿ ಸದಸ್ಯರು, ಹಿರಿಯ ನಾಗರಿಕರು ಉಪಸ್ಥಿತರಿದ್ದರು.

Scroll to Top