ಉಜಿರೆ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಜಿರೆ, ಫೆ. 21. ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ.

ಮೃತರನ್ನು ನಿವೃತ್ತ ಗ್ರಾಮಕರಣಿಕ ಚಂದ್ರಮೋಹನ್ ರೈ (80) ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ಸಂಜೆ ವೇಳೆ ವಾಕಿಂಗ್ ಹೋಗಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಬೈಕ್ ಢಿಕ್ಕಿ ಹೊಡೆದಿತ್ತು. ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು: ಕಾರ್ಗಿಲ್ ವಿಜಯೋತ್ಸವ

error: Content is protected !!
Scroll to Top