► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.20. ಇದೇ ತಿಂಗಳ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಮಾಜಿ ರಾಷ್ಟ್ರಪತಿ ದಿ.ಅಬ್ದುಲ್ ಕಲಾಂ ಸೇರಿದಂತೆ ಹಲವು ಕೇಂದ್ರ ಹಾಗೂ ರಾಜ್ಯ ಮಟ್ಟದ ಸಚಿವರು ಹಾಗೂ ಸಂವಿಧಾನಿಕ ಹುದ್ದೆಯನ್ನು ಅಲಂಕರಿಸಿರುವ ಗಣ್ಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Scroll to Top