ಅರಂತೋಡು: ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 21. ಗರುಡ ಸ್ಪೋರ್ಟ್ ಕ್ಲಬ್ ವತಿಯಿಂದ 2ನೇ ವರ್ಷದ ಗರುಡ ಟ್ರೋಫಿ -2021 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆ.21 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ ವಹಿಸಿದರು. ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ರಿಕೆಟ್ ಅಂಗಣವನ್ನು ಅರಂತೋಡು ತೊಡಿಕಾನ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶೋಭಾ ಶೇಖರ ಉಳುವಾರು, ಅರಂತೋಡು ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ ಕಾರ್ಯದರ್ಶಿ ಎ.ತೀರ್ಥರಾಮ ಅಡ್ಕಬಳೆ, ಸಹಕಾರಿ ನಿರ್ದೆಶಕ ನಿಧೀಶ್, ಗರುಡ ಸ್ಪೊರ್ಟ್ಸ್ ಕ್ಲಬ್ ಅಧ್ಯಕ್ಷ ಮಧುಚಂದ್ರ ಮುಂತಾದವರು ಉಪಸ್ಥಿತರಿದ್ದರು. ಮಂಜುನಾಥ ಉಳುವಾರು, ಹಿತೇಶ್ ಗೌಡ, ಗುರುಕಿರಣ್ ರೈ ಸಹಕರಿಸಿದರು. ಮೋಹನ್ ಸ್ವಾಗತಿಸಿದರು.

Also Read  ಬಂಟ್ವಾಳ: ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ      ➤  ಗ್ಲೇಡಿಸ್ ಪಾಯ್ಸ್ ಗೆ ಪ್ರಥಮ ಸ್ಥಾನ

 

error: Content is protected !!
Scroll to Top