ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 21. ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ‌ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವಳನ್ನು ಸಿಂಧೂರಿಕಾ (24) ಎಂದು ಗುರುತಿಸಲಾಗಿದೆ. ಈಕೆ ಮೆಡಿಕಲ್​ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ನಗರದ ಕುಮಾರೇಶ್ವರ ಆಸ್ಪತ್ರೆಯ ಸಮೀಪ ಬಾಡಿಗೆ ಮನೆಯೊಂದರಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಈಕೆ ಪೋಷಕರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಬಾಗಲಕೋಟೆ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸೂರಿಕುಮೇರು: ಸರಣಿ ಕಳ್ಳತನ ➤ ಅಂಗಡಿ ಹಾಗೂ ಎರಡು ಮನೆಯ ಬೀಗ ಮುರಿದು ನಗ-ನಗದು ಕಳವು

error: Content is protected !!
Scroll to Top